ರಾಜ್ಯದಲ್ಲಿ ಕೊರೊನಾ ಅಬ್ಬರ ತಗ್ಗುವ ಜೊತೆಗೆ ಲಾಕ್ ಡೌನ್ ನಿಯಮ ಸಡಿಲಗೊಳ್ಳುತ್ತಿರುವ ಬೆನ್ನಲ್ಲೇ ಮಂಗಳೂರು ಮತ್ತು ಕೇರಳ ನಡುವಿನ ಬಸ್ ಸಂಚಾರ ಪುನರಾರಂಭಗೊಂಡಿದೆ.
ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರ ಅನುಕೂಲಕ್ಕಾಗಿ ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಷರತ್ತು ಅನ್ವಯ ಸೋಮವಾರದಿಂದ ಈ ಅನುಮತಿ ನೀಡಿದೆ.
ಕೆ ಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1 ಡೋಸ್ ಪಡೆದಿರಬೇಕು ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿಪಿಸಿಆರ್ ಪರೀಕ್ಷೆಯ ನಗೆಟಿವ್ ವರದಿ ಪಡೆದಿರಬೇಕು, ಇದನ್ನು ಎಂದು ಆಯಾ ಬಸ್ ನ ನಿರ್ವಾಹಕರು ಖಚಿತಪಡಿಸಕೊಳ್ಳಬೇಕು ಎಂದು ಷರತ್ತು ವಿಧಿಸಲಾಗಿದೆ.
ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ) ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ 2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.