ಸ್ಯಾಂಡಲ್ ವುಡ್‌ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ ಕೆಜಿಎಫ್-2 ಚಿತ್ರದ ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ದಾಖಲೆ ಮೊತ್ತಕ್ಕೆ ಖರೀದಿಸಿದೆ. ಈ ಮೂಲಕ ಕೆಜಿಎಫ್ ಮತ್ತು ಕೆಜಿಎಫ್ -2 ಎರಡೂ ಲಹರಿ ಪಾಲಾಗಿದೆ.
ರಾಕಿಂಗ್ ಸ್ಟಾರ್ ಯಶ್ ಹಾಗೂ ಪ್ರಶಾಂತ್ ನೀಲ್ ಗೆ ಜಾಗತಿಕ ಮಟ್ಟದಲ್ಲಿ ಹೆಸರು ತಂದುಕೊಟ್ಟ ಕೆಜಿಎಫ್ ಚಿತ್ರ ಭರ್ಜರಿ ಹಿಟ್ ಆಗಿದ್ದರಿಂದ 2ನೇ ಭಾಗ ಭಾರೀ ಕುತೂಹಲ ಮೂಡಿಸಿದೆ.
ಹೊಂಬಾಳೆ ಫಿಲಮ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾದ ಕೆಜಿಎಫ್-2 ಸಿನಿಮಾದ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯ ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ 7 ಕೋಟಿ 20 ಲಕ್ಷ ರೂ.ಗೆ ಖರೀದಿಸಿದೆ.