ಯಶ್ ನಟನೆಯ ಕೆಜಿಎಫ್ 2 ಏಪ್ರಿಲ್ 14ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ನಾಯಕ ನಟ ಯಶ್ (Yash), ನಾಯಕಿ ಪೂಜಾ ಹೆಗ್ಡೆ, ಸಂಜಯ್ ದತ್ (Sanjay Dutt), ರವೀನಾ ಟಂಡನ್ ದೆಹಲಿಯಲ್ಲಿ ಪ್ರಚಾರ ಕಾರ್ಯ ನಡೆಸಿ ಇದೀಗ ಮುಂಬೈನಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿರುವ ಚಿತ್ರವು ಈಗಲೇ ದಾಖಲೆಗಳನ್ನು ಬರೆಯುತ್ತಿದೆ. ಅಂದ್ ಹಾಗೆ ದಕ್ಷಿಣ ಭಾರತದ ಖ್ಯಾತ ಚಿತ್ರಗಳು ಮಾಡದ ಸಾಧನೆಯನ್ನೂ ‘ಕೆಜಿಎಫ್ 2’ ಬರೆಯುತ್ತಿದೆ. ಚಿತ್ರವು ಗ್ರೀಸ್ನಲ್ಲಿ ರಿಲೀಸ್ ಆಗುತ್ತಿದೆ. ಗ್ರೀಸ್ನಲ್ಲಿ ರಿಲೀಸ್ ಆಗಲಿರುವ ಮೊದಲ ದಕ್ಷಿಣ ಭಾರತದ ಸಿನಿಮಾ ಎಂಬ ಖ್ಯಾತಿಯನ್ನು ಕೆಜಿಎಫ್ ಬರೆಯಲಿದೆ.
ಯುರೋಪ್, ಅಮೇರಿಕಾ, ರಷ್ಯಾ ಸೇರಿದಂತೆ ವಿಶ್ವದ ಹಲವೆಡೆ ಕೆಜಿಎಫ್ 2 ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಗ್ರೀಸ್ನಲ್ಲಿ ಚಿತ್ರ ರಿಲೀಸ್ ಆಗಲಿದೆ. ಹಾಗೆಯೇ ಇಟಲಿಯಲ್ಲಿ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ.
ಇದನ್ನು ಓದಿ : – ರಶ್ಮಿಕಾ ಮಂದಣ್ಣಗೆ ಇಂದು ಹುಟ್ಟುಹಬ್ಬದ ಸಂಭ್ರಮ – ಇಲ್ಲಿದೆ ಈಕೆಯ ಬೋಲ್ಡ್ ಪೋಟೋಗಳು