ಕನ್ನಡತಿ’ ಸೀರಿಯಲ್ ಖ್ಯಾತಿಯ ಕಿರಣ್ ರಾಜ್ ನಟನೆಯ ‘ಬಡ್ಡೀಸ್’ ಸಿನಿಮಾ ಶೀಘ್ರವೇ ರಿಲೀಸ್

‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಪಾತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕಿರಣ್ ರಾಜ್ ( KIRAN RAJ ) ಅಭಿನಯದ ‘ಬಡ್ಡೀಸ್’ ಚಿತ್ರ ಜೂನ್ 24 ರಂದು ಬಿಡುಗಡೆಯಾಗುತ್ತಿದೆ.  ಕಿರಣ್ ರಾಜ್ ಅವರ ತಂದೆ, ತಾಯಿ ಹಾಗೂ ಅಭಿಮಾನಿ ಸಮರ್ಥ್ ಲಿರಿಕಲ್ ಸಾಂಗ್ ಬಿಡುಗಡೆ ಮಾಡಿದರು.

ಕಥೆ ಸಿದ್ಧ ಮಾಡಿಕೊಂಡು, ನಿರ್ಮಾಪಕರ ಹುಡುಕಾಟದಲ್ಲಿದ್ದಾಗ, ಸ್ನೇಹಿತರ ಮೂಲಕ ದುಬೈ ನಿವಾಸಿ ಭಾರತಿ ಶೆಟ್ಟಿ ಅವರ ಪರಿಚಯವಾಯಿತು. ಕಥೆ ಮೆಚ್ಚಿದ ಅವರು ನಿರ್ಮಾಣಕ್ಕೆ ಮುಂದಾದರು.ಇದೊಂದು ಸ್ನೇಹದ ಮಹತ್ವ ಸಾರುವ ಚಿತ್ರ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ಕಥಾಹಂದರ. ‘ಬಡ್ಡೀಸ್’ ಎಂದರೆ ಕಾಲೇಜಿನಲ್ಲಿ ಈಗಿನ ಹುಡುಗರು ಸ್ನೇಹಿತರನ್ನು ಕರೆಯುವ ಪದ. ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ.

ನಟ ಗೋಪಾಲ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಒಂದೇ ಟೇಕ್‌ನಲ್ಲಿ ಈ ಚಿತ್ರದ ಹಾಡೊಂದರ ನೃತ್ಯ ನಿರ್ದೇಶನ ಮಾಡಿರುವುದಾಗಿ ನೃತ್ಯ ನಿರ್ದೇಶಕ ಧನಂಜಯ್ ತಿಳಿಸಿದರು. ಜ್ಯೂಡಿ ಸ್ಯಾಂಡಿ ‘ಬಡ್ಡೀಸ್’ ಹಾಡುಗಳಿಗೆ ಸಂಗೀತ ನೀಡಿದ್ದು, ಅಮೆರಿಕ ನಿವಾಸಿ ನಿಭಾ ಶೆಟ್ಟಿ ಛಾಯಾಗ್ರಹಣ ಮಾಡಿದ್ದಾರೆ. ದನ್ನೂ ಓದಿ  : – ಮಗಳ ಫೋಟೋ ಹಂಚಿಕೊಂಡ ಪ್ರಿಯಾಂಕ ಚೋಪ್ರ- ನಿಕ್ ಜೊನಸ್

KIRAN RAJ - Home

ಒಂದು ಶಿಕಾರಿಯ ಕಥೆ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಸಿರಿ ಪ್ರಹಲ್ಲಾದ್ ಈ ಚಿತ್ರದಲ್ಲಿ ಕಿರಣ್ ರಾಜ್ ಜೊತೆ ನಟಿಸುತ್ತಿದ್ದಾರೆ. ಭಾರತಿ ಶೆಟ್ಟಿ ನಿರ್ಮಿಸಿರುವ ಬಡ್ಡೀಸ್ ಈ ಚಿತ್ರದ ಮೂಲಕ ನಿಭಾ ಶೆಟ್ಟಿ ಸಿನಿಮಾಟೋಗ್ರಾಫರ್ ಆಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇದನ್ನೂ ಓದಿ :- ಕೆಜಿಎಫ್-2 1000 ಕೋಟಿ ದಾಖಲೆ- ಟೀಸರ್ ಮೂಲಕ ಅಧಿಕೃತ ಮುದ್ರೆ ಒತ್ತಿದ ಹೊಂಬಾಳೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!