ಕೋಲ್ಕತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಕೆಕೆಆರ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಣ ಪಂದ್ಯ ಮುಂದೂಡಿಕೆಯಾಗಿದೆ.
ಗುಜರಾತ್ ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ಕೆಕೆಆರ್ ಮತ್ತು ಆರ್ ಸಿಬಿ ತಂಡಗಳ ಪಂದ್ಯ ನಡೆಯಬೇಕಿತ್ತು. ಎರಡೂ ತಂಡಗಳು ಪ್ರಸಕ್ತ ಐಪಿಎಲ್ ನಲ್ಲಿ 2ನೇ ಬಾರಿ ಮುಖಾಮುಖಿ ಆಗಲಿದ್ದವು.
ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗಾಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆ ಹೋದಾಗ ಸೋಂಕು ಇರುವುದು ದೃಢಪಟ್ಟಿದೆ.