ಸ್ಪಿನ್ನರ್ ಸುನೀಲ್ ನಾರಾಯಣ್ ಅವರ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 3 ವಿಕೆಟ್ ಗಳ ರೋಚಕ ಜಯ ಸಾಧಿಸಿದ ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 20 ಓವರ್ ಗಳಲ್ಲಿ 9 ವಿಕೆಟ್ ಗೆ 127 ರನ್ ಗಳಿಗೆ ನಿಯಂತ್ರಿಸಿದ ಕೆಕೆಆರ್ ತಂಡ 18.2 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಕೆಕೆಆರ್ ಪರ ಶುಭಮನ್ ಗಿಲ್ (30), ನಿತಿಶ್ ರಾಣಾ (36 ) ಮತ್ತು ಸುನೀಲ್ ನಾರಾಯಣ್ (21) ತಂಡವನ್ನು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಅವಿಶ್ ಖಾನ್ 3 ವಿಕೆಟ್ ಪಡೆದು ತಿರುಗೇಟು ನೀಡಿದರೂ ಮತ್ತೊಂದು ಕಡೆಯಿಂದ ಉತ್ತಮ ಬೆಂಬಲ ದೊರೆಯಲಿಲ್ಲ.