ಸಾರಿಗೆ ನೌಕರರ ಹೋರಾಟದ ನೇತೃತ್ವ ವಹಿಸಿರುವ ರೈತ ಪರ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸುತ್ತಿದ್ದಾಗ ದಾಳಿ ಮಾಡಿದ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ರೈತ ಮುಖಂಡರು ಮತ್ತು ಸಾರಿಗೆ ನೌಕರರು ಸಭೆ ನಡೆಸುತ್ತಿದ್ದರ ಮಾಹಿತಿ ಪಡೆದ ಪೊಲೀಸರು ಶನಿವಾರ ಬೆಳಿಗ್ಗೆ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ಚೆನ್ನಮ್ಮ ವೃತ್ತದ ಬಳಿಯ ಹೋಟೆಲ್ ನಿಂದ ಹೊರ ಬರುತ್ತಿದ್ದಂತೆ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.