ಸಾರಿಗೆ ನೌಕರರರು ಇಂದಿನಿಂದ ಧರಣಿ ಮತ್ತು ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕಚೇರಿಗೆ ನುಗ್ಗಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಗಾಂಧಿನಗರದಲ್ಲಿರುವ ಕೋಡಿಹಳ್ಳಿ ಕಚೇರಿಗೆ ನುಗ್ಗಿದ ಪೊಲೀಸರು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, ಕೂಟದ ಜಂಟಿ ಕಾರ್ಯದರ್ಶಿ ಆನಂದ್ ಸೇರಿದಂತೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ಸಾರಿಗೆ ನೌಕರರು ಇಂದು ಧರಣಿ, ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರಿಂದ ಪೊಲೀಸರು ಕಚೇರಿಗೆ ನುಗ್ಗಿ ಕಾರ್ಯಕರ್ತರನ್ನು ಎಳೆದಾಡಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ.
ಇಂದು ಧರಣಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರರು ಕನ್ನಡ ಪರ ಸಂಘಟನೆಯ ಕಾರ್ಯಕರ್ತರ ಕೈಯಲ್ಲಿ ಇದ್ದ ಅಂಬೇಡ್ಕರ್ ಫೋಟೋ ಪುಡಿ ಪುಡಿ ಆಗಿದ್ದು, ಕಾರ್ಯಕರ್ತರೊಬ್ಬರು ಒಡೆದ ಗಾಜನ್ನು ಚುಚ್ಚಿಕೊಳ್ಳಲು ಯತ್ನಿಸಿದ್ದಾರೆ.
ಕೈಯಲ್ಲೇ ಗಾಜು ಹಿಡಿದುಕೊಂಡಿದ್ದ ಹಿನ್ನೆಲೆಯಲ್ಲಿ ಕಾರ್ಯಕರ್ತನ ಕೈ ಹಾಗೂ ಮುಖದಲ್ಲಿ ಗಾಯ ಆಗಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಗಾಂಧಿನಗರದ ಕಚೇರಿಗೆ ಪೊಲೀಸರು ಬಿಗ ಜಡಿದಿದ್ದಾರೆ.