ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇದೇ ವೇಳೆ ರೈತ ಸಂಘದ ರಾಜ್ಯಾಧ್ಯಕ್ಷರಾಗಿ ನೂತನವಾಗಿ ಹೆಚ್.ಆರ್ ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಲಂಚಕ್ಕೆ ಬೇಡಿಕೆಯಿಟ್ಟ ಗಂಭೀರ ಆರೋಪ ಕೇಳಿಬಂದಿದ್ದರಿಂದ ಇಂದು ಶಿವಮೊಗ್ಗದಲ್ಲಿ ನಡೆದ ರೈತ ಸಂಘ, ಹಸಿರು ಸೇನೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಕೋಡಿಹಳ್ಳಿ ಚಂದ್ರಶೇಖರ್ ಅಲ್ಲಗಳೆದಿಲ್ಲ. ಅವರ ವಿರುದ್ಧ ಅದಾಗಲೇ ಸಣ್ಣ ಪುಟ್ಟ ಆರೋಪಗಳು ಕೇಳಿಬಂದಿದ್ದವು. ಇದನ್ನೂ ಓದಿ : – ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧದ ಲಂಚ ಆರೋಪ- ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಮಸಿ ದಾಳಿ..!
ಆದರೆ ಇದೀಗ ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನೂತನ ಅಧ್ಯಕ್ಷ ಹೆಚ್.ಆರ್ ಬಸವರಾಜಪ್ಪ ಹೇಳಿದ್ದಾರೆ. ತಮ್ಮ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದರಿಂದ ಅವರು ನೈತಿಕ ಹೊಣೆಹೊತ್ತು ಅಧ್ಯಕ್ಷ ಸ್ಥಾನಕ್ಕೆ ಅವರೇ ರಾಜಿನಾಮೆ ನೀಡಬೇಕಿತ್ತು. ಆದರೆ ತಾವು ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ತುರ್ತು ಸಭೆ ಸೇರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದ್ರು.
ಇದನ್ನೂ ಓದಿ : – ವೇದಿಕೆಯಲ್ಲಿ ಹಾಡುವಾಗಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ಕೇರಳದ ಗಾಯಕ..!