ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರಮ್ಮ ಬಡಾವಣೆಯ ಕಾವ್ಯಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಕೋಲಾರ ತಾಲೂಕಿನ ಬೆಗ್ಗಿಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕಾವ್ಯಾ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ.