ಕೋಲಾರ ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರು ಪೈರಿಂಗ್ ಮಾಡಿದ್ದಾರೆ. ಕೋಲಾರ ತಾಲೂಕಿನ ಬೆಂಗಳೂರು ಚೆನೈ ರಾಷ್ಟ್ರೀಯ ಹೆದ್ದಾರಿ 75ರ ಚೆಲುವನಹಳ್ಳಿ ಸಮೀಪ ಫೈರಿಂಗ್ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯದ ಮುಂಭಾಗ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿಯನ್ನು ಕಳೆದ ಜೂ. 7 ರಂದು ಬೆಳಗ್ಗೆ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಮುಖ ಆರೋಪಿಯಲ್ಲಿ ಓರ್ವ ಬಾಲಾಜಿ ಸಿಂಗ್ ಎಂಬುವನ ಮೇಲೆ ಮುಳಬಾಗಿಲು ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ಇಂದು ಬೆಳಗ್ಗೆ ಫೈರಿಂಗ್ ಮಾಡಿದ್ದಾರೆ. ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗೂ ಸುಫಾರಿ ಕಿಲ್ಲರ್ ಆಗಿರುವ ಬಾಲಾಜಿ ಸಿಂಗ್ ನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.
ಕೋಲಾರಕ್ಕೆ ಕರೆತರುವ ಸಂಧರ್ಭದಲ್ಲಿ ಚೆಲುವನಹಳ್ಳಿ ಬಳಿ ಪೋಲಿಸ್ ವಾಹನವನ್ನ ನಿಲ್ಲಿಸಿದ ವೇಳೆ ಆರೋಪಿ ಪೋಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ, ಈ ವೇಳೆ ಆರೋಪಿಯನ್ನು ಹಿಡಿಯಲು ಹೋದ ಮುಳಬಾಗಿಲು ಠಾಣೆಯ ಪೋಲಿಸ್ ಪೇದೆ ವಿನಾಯಕ ಎಂಬುವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ತಕ್ಷಣ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ಬಾಲಾಜಿ ಸಿಂಗ್ ಕಾಲಿಗೆ ಪೈರಿಂಗ್ ಮಾಡಿ ಬಂಧಿಸಿದ್ದಾರೆ. ಕಾಲಿಗೆ ಗುಂಡೇಟು ಬಿದ್ದು ಗಾಯಗೊಂಡಿದ್ದ ಆರೋಪಿಯನ್ನ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನೂ ಫೈರಿಂಗ್ ನಡೆದ ಘಟನೆ ಸ್ಥಳಕ್ಕೆ ಜಿಲ್ಲಾ ಎಸ್ಪಿ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ : – NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅಖಾಡಕ್ಕೆ – ಪ್ರಧಾನಿ, ಹಲವು ರಾಜ್ಯಗಳ ಸಿಎಂ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ