ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಹೊಡೆದು ಸ್ಧಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ರಸ್ತೆ ಜೂ ಹಳ್ಳಿ ಗೇಟ್ ಬಳಿ ನಡೆದಿದೆ. ಕಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜುವಾಗಿದೆ.
ಕಾರಿನಲ್ಲಿದ್ದ 3 ಮಂದಿಗೆ ಗಂಭೀರ ಗಾಯವಾಗಿದ್ದು, ಗಾಯಾಳನ್ನ ಸ್ಧಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.