ಮುಸ್ಲಿಂ ಗೂಂಡಾಗಳಿಂದ ಭಜರಂಗದಳ ಕಾರ್ಯಕರ್ತನ ಕೊಲೆ: ಸಚಿವ ಈಶ್ವರಪ್ಪ ಆರೋಪ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಯಿಂದ ಪ್ರಚೋದನೆಗೊಂಡ ಮುಸ್ಲಿಂ ಗೂಂಡಾಗಳು ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಶಿವಮೊಗ್ಗಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳು ಈ ಕೊಲೆ ಮಾಡಿದ್ದಾರೆ, ಈವರೆಗೆ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಇತ್ತೀಚೆಗೆ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜ ಹಾರಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರಿಂದಲೇ ಮುಸ್ಲಿಮರಿಗೆ ಕುಮ್ಮಕ್ಕು ಸಿಕ್ಕಿದೆ ಎಂದರು.

ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಎಲ್ಲಿಂದ ಬಂದಿದೆ ಎಂದು ಸರ್ಕಾರ ತನಿಖೆ ಮಾಡುತ್ತದೆ ಎಂದು ಅವರು ಹೇಳಿದರು. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ಈಶ್ವರಪ್ಪ ನುಡಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!