ನನ್ನದು ತೆರೆದ ಪುಸ್ತಕ – ಸೈನಿಕನ ವಿರುದ್ಧ ಹೆಚ್ಡಿಕೆ ಹಿಗ್ಗಾಮುಗ್ಗಾ ವಾಗ್ದಾಳಿ

ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ವಿರುದ್ಧ ಮಾಜಿ  ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಾಜ್ ವೆಸ್ಟೆಂಡ್‌ ಗೆ ರಾಸಲೀಲೆ ಮಾಡಲು ಹೋಗ್ತಿರಲಿಲ್ಲ. ಸರ್ಕಾರಿ ಬಂಗಲೆ ಇರಲಿಲ್ಲ, ಹಾಗಾಗಿ ರೆಸ್ಟ್ ಮಾಡಲು ಹೋಗ್ತಿದ್ದೆ. ಈಗಲೂ ತಾಜ್ ವೆಸ್ಟ್ ಗೆ ಹೋಗ್ತೀನಿ. ನನ್ನದು ತೆರೆದ ಪುಸ್ತಕ.  ನನ್ನ ಪಿಎ ಈಗಲೂ ಇರ್ತಾರೆ. ಸಾ.ರಾ ಮಹೇಶ್ ಇರ್ತಿದ್ರು. ಇವನತ್ರ ನೋಡಿ ಕಲಿಯಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ. ಇವನು ಗುಡಿಸಲಲ್ಲಿ ಇದ್ದನಾ.? ಇಲ್ಲೇ ಯು.ಬಿ ಸಿಟಿ ಪಕ್ಕದಲ್ಲಿ ಇದ್ನಲ್ಲ. ನನ್ನದು ಕದ್ದು ಮುಚ್ಚಿ ಯಾವುದೂ ಇಲ್ಲ.  ಚನ್ನಪಟ್ಟಣದಲ್ಲಿ ಇವನದು ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಖಾಸಗಿ ಬಸ್ ನಿಲ್ದಾಣಕ್ಕೆ 30ಕೋಟಿ ಪ್ರಾಜೆಕ್ಟ್ ಮಾಡಿ ಎಸ್ಟಿಮೇಟ್ ಮಾಡಿದ್ರು.  ಅವನ್ಯಾರೋ ಕಂಟ್ರಾಕ್ಟರ್ ಕೈಯಲ್ಲಿ ಗುಂಡಿ ಹೊಡೆಸಿದ್ದಾನೆ. ಅದಕ್ಕೆ ನಾನು ಹಣ ಕೊಡಿಸಬೇಕಾ. ಅಲ್ಲಿ ಹೋಗಿ ನೋಡಿ ತಗಡು ಹೊಡೆಸಿ ಇಟ್ಟಿದ್ದಾನೆ. ಅಂಬೇಡ್ಕರ್ ಭವನ ಗುಂಡಿ ಆಗಿದೆ, ನೀರು ನಿಂತಿದೆ. ಅದನ್ನ ನಾನು ಹೋಗಿ ಕ್ಲೀನ್ ಮಾಡಿಸಬೇಕು. ನಾನು ಕಣ್ಣೀರು ಹಾಕ್ಕೊಂಡ್ ಹೋಗಿಲ್ಲ. ಸಿಎಂ ಆಗಿದ್ದು ಚನ್ನಪಟ್ಟಣಕ್ಕೆ ಅಲ್ಲ, ಇಡೀ ರಾಜ್ಯಕ್ಕೆ ಎಂದು ತಿರುಗೇಟು ನೀಡಿದ್ದಾರೆ. ಮೆಗಾಸಿಟಿ ಅಂತ ಪ್ರಾಜೆಕ್ಟ್ ಮಾಡಲು ಹೋಗಿ ಸಾವಿರಾರು ಜನರನ್ನ ಬೀದಿ ಪಾಲು ಮಾಡಿದ. ಸಿನಿಮಾ ತೆಗೆದು ಎಲ್ಲರನ್ನೂ ಹಾಳು ಮಾಡಿದ. ಕಂಡೋರ ದುಡ್ಡು ತೆಗೆದುಕೊಂಡು ಹಾಳು ಮಾಡಿದ. ಇವನು ನನ್ನ ವಿರುದ್ಧ ಆರೋಪ ಮಾಡ್ತಾನಾ.? ಸೈನಿಕ ಅಂತ ಸಿನಿಮಾ ಮಾಡಲು ಹೋಗಿದ್ದ. ಇಂದಿಗೂ ಹಣ ಕೊಟ್ಟವರು ಬೀದಿಪಾಲಾಗಿದ್ದಾರೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.  

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!