ಆಮಿರ್ ಖಾನ್ ನಟಿಸಿರುವ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆ ದಿನಾಂಕ ಮತ್ತೆ ಮುಂದೂಡಲಾಗಿದೆ. ಇದರಿಂದ ಭಾರೀ ನಿರೀಕ್ಷೆ ಹುಟ್ಟಿಸಿರುವ ಕೆಜಿಎಫ್-2ಗೆ ದೊಡ್ಡ ರಿಲೀಫ್ ಸಿಕ್ಕಿದಂತಾಗಿದೆ.
ಯಶ್ ಅಭಿನಯಿಸಿ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಮೊದಲ ಭಾಗ ಭಾರೀ ಯಶಸ್ಸಿನಿಂದ ಕೆಜಿಎಫ್ -2 ಭಾರೀ ನಿರೀಕ್ಷೆ ಮೂಡಿಸಿದ್ದು, ಏಪ್ರಿಲ್ 14ರಂದು ಬಿಡುಗಡೆ ಆಗಲಿದೆ.
ಕೆಜಿಎಫ್ -2 ಮತ್ತು ಲಾಲ್ ಸಿಂಗ್ ಚಡ್ಡಾ ಒಂದೇ ದಿನ ಬಿಡುಗಡೆ ಆಗುತ್ತಿರುವುದರಿಂದ ಸ್ವತಃ ಆಮೀರ್ ಖಾನ್ ಕೆಜಿಎಫ್ ತಂಡದ ಬಳಿ ಕ್ಷಮೆಯಾಚಿಸಿದ್ದರು. ಆದರೆ ಇದೀಗ ಆಗಸ್ಟ್ 11ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿರುವುದಾಗಿ ಪ್ರಕಟಿಸಿದೆ.
ಸಿನಿಮಾದ ಕೆಲಸ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆ ದಿನಾಂಕವನ್ನು ಆಗಸ್ಟ್ 11ಕ್ಕೆ ಮುಂದೂಡಲಾಗಿದೆ ಎಂದು ಆಮೀರ್ ಖಾನ್ ಇನ್ ಸ್ಟಾಗ್ರಾಂ ನೋಡಿಕೊಳ್ಳುತ್ತಿರುವ ಕಂಪನಿ ತಿಳಿಸಿದೆ.