ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ರು. ಇದನ್ನುಓದಿ- ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಬೆಳಗಾವಿ ಖಾಸಗಿ ಹೋಟೆಲ್ ಮುಂದೆ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಒಳಗೆ ಬಿಜೆಪಿ ನಾಯಕ ಸಭೆ ನಡೆಯುತ್ತಿದ್ದರೆ ಹೊರಗೆ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನ ವಶಕ್ಕೆ ಪಡೆಯಲಾಗಿದೆ.
ಶಾಸಕಿ ಹೆಬ್ಬಾಳ್ಕರ್ , ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ನಗರ ಅಧ್ಯಕ್ಷ ರಾಜು ಸೇಠ್ ಸೇರಿ 20 ಕ್ಕೂ ಅಧಿಕ ಕಾರ್ಯಕರ್ತರನ್ನ ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಪೊಲೀಸ್ ಕಮೀಷನರ್ ಬೋರಲಿಂಗಯ್ಯಾ ಮನವೊಲಿಕೆ ಯತ್ನ ನಡೆಸಿದ್ರುಪ್ರತಿಭಟನಾಕಾರರು ಕ್ಯಾರೆ ಅಂದಿಲ್ಲ. ಪೊಲೀಸರು ವಶಕ್ಕೆ ಪಡೆಯುತ್ತಿದಂತೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಇದನ್ನುಓದಿ – ಮೊದಲು ಈಶ್ವರಪ್ಪನನ್ನ ಬಂಧಿಸಿ – ಸಿದ್ದರಾಮಯ್ಯ, ಡಿಕೆಶಿ ಆಗ್ರಹ