ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅರ್ಸೆಲರ್ ಮಿತ್ತಲ್ ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಲಕ್ಷ್ಮಿ ಎನ್. ಮಿತ್ತಲ್ ಅವರೊಂದಿಗೆ ಮಾತುಕತೆ ನಡೆಸಿದ್ರು.
ರಾಜ್ಯದಲ್ಲಿ ಹೂಡಿಕೆ ಮಾಡುವ ಕುರಿತಂತೆ ಉಭಯ ನಾಯಕರು ಚರ್ಚಿಸಿದ್ರು. ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ , ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಉಪಸ್ಥಿತರಿದ್ದರು.
ಇದನ್ನೂ ಓದಿ :- ವಿಜಯೇಂದ್ರ ಗೆ ಸಿಗದ ಪರಿಷತ್ ಟಿಕೆಟ್ – ಮಾಜಿ ಸಿಎಂ ಬಿಎಸ್ ವೈ ಗೆ ಶಾಕ್