ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ.ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ

ಬೆಂಗಳೂರು : ವಿಧಾನಪರಿಷತ್ ಸಭಾಪತಿ ಕೆ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡಿದ್ದಾರೆ. 2018 ಡಿ 12 ರಿಂದ ಕೆ ಪ್ರತಾಪ್ ಚಂದ್ರ ಶೆಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಸೇವೆ ಸಲ್ಲಿಸುತ್ತಿದ್ದರು
ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜಿನಾಮೆ ಸಲ್ಲಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ರಾಜಿನಾಮೆ ಸಲ್ಲಿಸಲು ಸಹಮತ ದೊರೆತಿತ್ತು.
ಇಂದು 10 ನಿಮಿಷಗಳ ವಿದಾಯ ಭಾಷಣದ ನಂತರ ರಾಜೀನಾಮೆ ನೀಡಿ, ಸದನವನ್ನು ಶುಕ್ರವಾರಕ್ಕೆ ಮುಂದೂಡಿದರು.