ಕೊರೊನಾ ವೈರಸ್ ಎರಡನೇ ಅಲೆ ಅಬ್ಬರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಮುಂದುವರಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಇಳಿಕೆಯಾಗುತ್ತಿದ್ದರೂ 14 ದಿನ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ಶಿಫಾರಸು ಮಾಡಿದೆ ಎನ್ನಲಾಗಿದೆ.
ತಜ್ಞರ ಸಮಿತಿ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಶಿಫಾರಸು ಮಾಡಿದ್ದು, ವರದಿಯನ್ನು ಆರೋಗ್ಯ ಸಚಿವ ಕೆ.ಸುಧಾಕರ್ ಅವರ ಕೈಗೆ ಹಸ್ತಾಂತರಿಸಿದೆ.
ಸಚಿವ ಸುಧಾಕರ್ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವರದಿಯನ್ನು ಹಸ್ತಾಂತರಿಸಲಿದ್ದು, ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.