ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕೊರೊನಾ 2ನೇ ಅಲೆ ಭೀಕರತೆಗೆ ಕಡಿವಾಣ ಹಾಕಲು ಸರ್ಕಾರ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ವೀಕೆಂಡ್ ಕರ್ಫ್ಯೂ ಯಶಸ್ಸಿನ ಬೆನ್ನಲ್ಲೇ 14 ದಿನಗಳ ಕಾಲ ಲಾಕ್ಡೌನ್ ಹೇರಲು ಸರ್ಕಾರ ನಿರ್ಧರಿಸಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ 14 ದಿನಗಳ ಕಾಲ ರಾಜ್ಯದಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. 2 ವಾರಗಳ ಕಾಲ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡರು. 2 ವಾರದಲ್ಲಿ ಕೊರೊನಾ ಕಂಟ್ರೋಲ್ಗೆ ಬರದಿದ್ದರೆ ಮತ್ತೆ ಲಾಕ್ಡೌನ್ ಮುಂದುವರೆಯುವ ಸುಳಿವನ್ನು ಕೊಟ್ಟರು.
ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:
* ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ
* ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್
* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ
* ಗೂಡ್ಸ್ ಸರಕು ಸಾಗಾಟಕ್ಕೆ ಮಾತ್ರ ಅವಕಾಶ
* ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಅವಕಾಶ
* ಮದ್ಯಗಂಡಿಗಳು ಓಪನ್, ಆದರೆ ಪಾರ್ಸೆಲ್ ಗೆ ಅವಕಾಶ
* ಮೆಟ್ರೋ ಸೇವೆ ಸ್ಥಗಿತ
* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ
* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ
* 18-45 ವರ್ಷಗಳವರೆಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ
* ಚುನಾವಣೆಗಳನ್ನು ಮುಂದೂಡಲು ಶಿಫಾರಸು