ಪ್ಯಾರಿಸ್: ಕೊರೋನಾ ವೈರಸ್ ಸೋಂಕಿನಿಂದ ಫ್ರಾನ್ಸ್ ತತ್ತರಿಸಿ ಹೋಗಿದೆ. ಎಷ್ಟೇ ಕಠಿಣ ನಿಯಮಗಳನ್ನು ಜಾರಿ ಮಾಡಿದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಫ್ರಾನ್ಸ್ನಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗಿದೆ.
ಲಾಕ್ಡೌನ್ ವಿಧಿಸದಿದ್ದರೆ ದೇಶದಲ್ಲಿ ಪರಿಸ್ಥಿತಿ ನಿಯಂತ್ರಣ ಮೀರುವ ಸಾಧ್ಯತೆಯಿದೆ. ಹೀಗಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಅಲ್ಲದೇ, ಫ್ರಾನ್ಸ್ನಲ್ಲಿ ಎಲ್ಲಾ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.
ಕಳೆದ ಒಂದು ವಾರದಿಂದ ಪ್ಯಾರಿಸ್ನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿತ್ತು. ಆದರೂ, ಕೊರೋನಾ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿಲ್ಲ. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮುಂದಿನ ಮೂರು ವಾರಗಳವರೆಗೆ ಫ್ರಾನ್ಸ್ನಲ್ಲಿ ಲಾಕ್ಡೌನ್ ಜಾರಿಗೊಳಿಸಿ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಆದೇಶಿಸಿದ್ದಾರೆ.