ಅಮಿತ್ ಶಾ ಬೆಂಗಳೂರಿನಲ್ಲಿ ಇರುವಾಗಲೇ ರಾಜ್ಯ ಕಾಂಗ್ರೆಸ್ ಘಟಕ ಬಸವರಾಜ ಬೊಮ್ಮಾಯಿ ಸರ್ಕಾರದ ಕಮಿಷನ್ ದಂಧೆಯ ಆರೋಪದ ವಿಚಾರದಲ್ಲಿ ಸಾಲು ಸಾಲು ಟ್ವೀಟ್ ಮಾಡಿದೆ.
ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡಿರುವುದು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸೈಡ್ಲೈನ್ ಮಾಡಲು ಎಂದು ಕೆಪಿಸಿಸಿ ಆರೋಪಿಸಿದೆ. ಪ್ರತಿ ಸರ್ಕಾರಿ ನೇಮಕಾತಿಯಲ್ಲಿ, ಪ್ರತಿ ಸರ್ಕಾರಿ ವರ್ಗಾವಣೆಯಲ್ಲಿ, ಪ್ರತಿ ಸರ್ಕಾರಿ ಗುತ್ತಿಗೆಯಲ್ಲಿ 40% ಕಮಿಷನ್ ಪಡೆದು, ಇಡೀ ರಾಜ್ಯವನ್ನ ಲೂಟಿ ಮಾಡಿ, ರಾಜ್ಯದ ಸಂಪನ್ಮೂಲಗಳನ್ನ ಗುಡುಸಿ ಗುಂಡಾಂತರ ಮಾಡಿದ ಆದಾಯದಲ್ಲಿ ಬೆಳ್ಳಿ ತಟ್ಟೆಯಲ್ಲಿ ಭೋಜನ ಸವಿಯುವವರಿಗೆ, ಭಾರತ ಹಸಿವು ಸೂಚಂಕ್ಯದಲ್ಲಿ 117ನೇ ಸ್ಥಾನಕ್ಕೆ ಕುಸಿದಿರೋದು ಕಾಣೋದು ಹೇಗೆ? ಇದನ್ನೂ ಓದಿ :- ರಾಜ್ಯ ಸರ್ಕಾರದ 40%ಗೆ ಕೇಂದ್ರ ಸರ್ಕಾರ ಮುದ್ರೆ ಒತ್ತಿದೆ – ಸಿದ್ದರಾಮಯ್ಯ
ಕೇಂದ್ರ ಗೃಹಸಚಿವರು ಬಂದಿರುವುದು ರಾಜ್ಯದ ಭೇಟಿ ಕೆಟ್ಟು ನಿಂತ ಡಬಲ್ ಇಂಜಿನ್ ಸರ್ಕಾರವನ್ನು ತಳ್ಳಿ ಸ್ಟಾರ್ಟ್ ಮಾಡುವುದಕ್ಕಲ್ಲ, ಬದಲಾಗಿ ಜೆ.ಪಿ ನಡ್ಡಾ ಅವರನ್ನು ಸೈಡ್ ಲೈನ್ ಮಾಡುವುದಕ್ಕೆ! ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಆಗುಹೋಗುಗಳನ್ನು ಚರ್ಚಿಸುವ ಬದಲು ಪಕ್ಷದ ಸಭೆ ಮಾಡುತ್ತಿದ್ದಾರೆ. ಅವರ ಭೇಟಿಯಿಂದ ರಾಜ್ಯಕ್ಕೆ ನಯಾಪೈಸೆ ಉಪಯೋಗವಿಲ್ಲ ಎಂದು ಕೆಪಿಸಿಸಿ ಲೇವಡಿ ಮಾಡಿದೆ.
ಇದನ್ನೂ ಓದಿ :- ಪೂನಾದಲ್ಲಿ ದಿವ್ಯಾ ಹಾಗರಗಿ ಅವರಿಗೆ ಆಶ್ರಯ ಕೊಟ್ಟಿರೋದು ಕಾಂಗ್ರೆಸ್ – ಆರಗ ಜ್ಞಾನೇಂದ್ರ ಆರೋಪ