ತುಮಕೂರು : ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.
ಮೃತರನ್ನು ರಾಮಚಂದ್ರ(30), ಪ್ರಿಯ(25) ಎಂದು ಗುರುತಿಸಲಾಗಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬೀರೂರು ಮೂಲದರು ಎನ್ನಲಾಗಿದೆ.
ಇಬ್ಬರು ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ಬಗ್ಗೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.