ದೇವಾಲಯದ ಪ್ರವೇಶ ದ್ವಾರಕ್ಕೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯ ನೆಲಮಂಗಲ ಸಮೀಪ ಅಡಕಮಾರನಹಳ್ಳಿ ಆಂಜನೇಯ ಸ್ವಾಮಿ (Anjaneya swami temple) ದೇವಾಲಯದಲ್ಲಿ ನಡೆದಿದೆ.
ದೇವಾಲಯದ ಪ್ರವೇಶ ದ್ವಾರಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಂಬ ಕುಸಿದು, ಬೈಕ್ ಸವಾರನ ಮೇಲೆ ಬಿದ್ದಿದೆ. ಕಂಬದ ಅವಶೇಷಗಳಡಿ ಸಿಲುಕಿದ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ನರಸಪ್ಪ ಬೈಕ್ನಲ್ಲಿ ಹೋಗುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : – UPSC ಪರೀಕ್ಷೆ ಹಿನ್ನಲೆ – ಒಂದು ಗಂಟೆ ಮುಂಚಿತವಾಗಿ ನಾಳೆ ಮೆಟ್ರೋ ಸೇವೆ ಆರಂಭ