ಸ್ಯಾಂಡಲ್ವುಡ್ನ ಕ್ಯೂಟ್ ಜೋಡಿ ನಟ ಡಾರ್ಲಿಂಗ್ ಕೃಷ್ಣ ಹಾಗೂ ನಟ ಮಿಲನಾ ನಾಗರಾಜ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಡಾರ್ಲಿಂಗ್ ಕೃಷ್ಣಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಹೇಳಿದ್ದಾರೆ.
ಮಿಲನಾ ಹಾಗೂ ನನ್ನ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು, ಇಬ್ಬರೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಮ್ಮೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇವೆಂದು ತಿಳಿಸಿದ್ದಾರೆ.
ಸ್ಯಾಂಡಲ್ವುಡ್ ಯುವ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಪ್ರೇಮಿಗಳ ದಿನದಂದು ಗಣ್ಯರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು.
ಇತ್ತೀಚಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ಅಜಯ್ ದೇವಗನ್, ಹಿರಿಯ ನಟ ಗೋವಿಂದ್ ಹಾಗೂ ನಟಿ ಕತ್ರಿನಾ ಕೈಫ್ ಸೇರಿದಂತೆ ಸಾಕಷ್ಟು ತಾರೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.