ಪ್ರಿಯಕರನ ಜೊತೆ ವಿವಾಹಿತ ಯುವತಿಯ ಶವ ಕೊಳೆತ ಸ್ಥಿತಿಯಲ್ಲಿ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬಾಳಮ್ಮ ಬೆಟ್ಟದ ಬಳಿ ಪತ್ತೆಯಾಗಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚಿಟಿ ತಾಲೂಕಿನ ಉರುಗ್ಯಂ ಗ್ರಾಮದ ನಿವಾಸಿಗಳಾದ ಚಂದನ(20), ಸತೀಶ್ ಕುಮಾರ್ (24) ಮೃತಪಟ್ಟಿದ್ದಾರೆ.
ಕಬ್ಬಾಳು ಬೆಟ್ಟದಿಂದ ಹಾರಿ ಬಿದ್ದು ಆತ್ಮಹತ್ಯೆ ಇಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.