ಚಿಂದ್ವಾರಾ: ಕೆಲವು ರಾಜ್ಯಗಳಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಅದರಲ್ಲೂ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನೇ ದಿನೇ ಏರುತ್ತಿವೆ.
ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರ ಲಾಕ್ಡೌನ್ ಘೋಷಿಸಿದೆ. ಚಿಂದ್ವಾರಾ, ರಟ್ಲಾಮ್ ನಗರ, ಬೇತುಲ್ ಮತ್ತು ಖರ್ಗಾಂವ್ನಲ್ಲಿ ಇಂದಿನಿಂದ ಲಾಕ್ಡೌನ್ ಜಾರಿಯಾಗಲಿದೆ.
ಇಂದಿನಿಂದ ಏ.5ರ ಬೆಳಗ್ಗೆ 6 ಗಂಟೆಯವರೆಗೆ ಈ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿಯಾಗಲಿದೆ. ಈ ಮುನ್ನ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಳವಾಗಿದ್ದ ಒಟ್ಟು 12 ಜಿಲ್ಲೆಗಳಲ್ಲಿ ಮಧ್ಯಪ್ರದೇಶ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿತ್ತು.
ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ನಾಲ್ಕು ಜಿಲ್ಲೆಗಳಿಗೆ ಹಿರಿಯ ಆರೋಗ್ಯ ಅಧಿಕಾರಿಗಳ ಪ್ರತ್ಯೇಕ ತಂಡವನ್ನು ಕಳುಹಿಸಿದ್ದು, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ ಕೋವಿಡ್ ಸೋಂಕು ನಿಗ್ರಹಿಸಲು ಸ್ಥಳೀಯ ಅಧಿಕಾರಿಗಳಿಗೆ ನೆರವು ನೀಡುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.