ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇಂದು ಒಂದೇ ದಿನ 35,726 ಹೊಸ ಪ್ರಕರಣಗಳು ಪತ್ತೆ ಆಗಿವೆ. 35,726 ಹೊಸ ಪ್ರಕರಣಗಳ ಪೈಕಿ ಕೇವಲ 14,523 ಜನ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 166 ಜನ ಕೊರೋನಾಗೆ ಬಲಿ ಆಗಿದ್ದಾರೆ.
ಇನ್ನೂ ಸಕ್ರೀಯವಾಗಿರುವ ಪ್ರಕರಣಗಳು 3,03,475 ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 26,73,461 ಪತ್ತೆಯಾಗಿದ್ದು ಆ ಪೈಕಿ 23,14,579 ಜನ ಗುಣ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 54,073ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕು ಹರಡುವಿಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಭಾನುವಾರದಿಂದ (ಮಾರ್ಚ್ 28) ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ಮುಂದಿನ ಆದೇಶದವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಕೋವಿಡ್-19 ಹರಡುವಿಕೆ ತಡೆಯುವ ಸಲುವಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.