ಲಂಚ ಪ್ರಕರಣವನ್ನು ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶಿಸಿದ ಬೆನ್ನಲ್ಲೇ ಅನಿಲ್ ದೇಶ್ ಮುಖ್ ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ವೀರ್ ಸಿಂಗ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಿ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ಗಂಭೀರ ಆರೋಪಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಾಂಬೆ ಹೈಕೋರ್ಟ್ ಸಿಬಿಐಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಅನಿಲ್ ದೇಶ್ ಮುಖ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.