ಬೆಂಗಳೂರು : ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಕುರಿತು ಗಂಭೀರವಾಗಿ ಸರ್ಕಾರ ಪರಿಗಣಿಸಬೇಕು. ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಲಾಕ್ ಡೌನ್ ನಿಂದ ಕೊರೊನಾ ಕಟ್ಟಿಹಾಕಲಾಗದು, ಇದರಿಂದ ಗ್ರಾಮೀಣ ಪ್ರದೇಶಗಳಲ್ಲೂ ಈಗ ಸೋಂಕು ಹರಡುತ್ತಿದೆ. ರಾಜ್ಯದಲ್ಲಿ ಮಹಾರಾಷ್ಟ್ರ ಮಾದರಿಯ ಲಾಕ್ ಡೌನ್ ಜಾರಿಗೆ ತರಬೇಕು. ಇದರಿಂದ ಸೋಂಕಿತರ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬರಲಿದೆ ಎಂದರು.
ಸುಪ್ರೀಂಕೋರ್ಟ್ ಕೂಡ ಸೋಂಕಿತರ ಸಂಖ್ಯೆ ಹೆಚ್ಚಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮಾದರಿ ಲಾಕ್ ಡೌನ್ ಮಾಡಲು ಸೂಚಿಸಿದೆ. ಹಾಗಾಗಿ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ ಅಗತ್ಯವಿದೆ ಎಂದು ಹೇಳಿದರು.