ಟಾಲಿವುಡ್ ( TOLLYWOOD )ನಟ ಮಹೇಶ್ ಬಾಬು ( MAHESH BABU )ಇತ್ತೀಚೆಗಷ್ಟೇ ತಾಯಿಯನ್ನ ಕಳೆದುಕೊಂಡು ಆಘಾತದಲ್ಲಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹೇಶ್ ಬಾಬು ಅವರ ತಂದೆ ಕೃಷ್ಣ ತೀವ್ರ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಹೈಪ್ ಕ್ರಿಯೇಟ್ ಮಾಡಿರುವ 80 ವರ್ಷದ ಲೆಜೆಂಡ್ ಆಕ್ಟರ್ ಕೃಷ್ಣ ( KRISHNA ) ಇದೀಗ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಯ ನಂತರ ಕೃಷ್ಣ ಅವರ ಆರೋಗ್ಯ ಸ್ಟೇಬಲ್ ಆಗಿದೆ. ಜನರಲ್ ಚೆಕಪ್ಗೆ ಆಸ್ಪತ್ರೆಗೆ ಹೋಗಿದ್ದರು. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷ್ಣ ಅವರ ಪಿಆರ್ ಸುರೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ : – ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆ