ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಅಧಿಕಾರಕ್ಕೇರಿರುವ ಮಮತಾ ಬ್ಯಾನರ್ಜಿ ಮೇ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪಶ್ಚಿಮ ಬಂಗಾಳದ 292 ವಿಧಾನಸಭೆ ಕ್ಷೇತ್ರಗಳಲ್ಲಿ 217 ಕ್ಷೇತ್ರಗಳಲ್ಲಿ ಟಿಎಂಸಿ ಭರ್ಜರಿ ಜಯ ಗಳಿಸಿದೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಮೇ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂದಿಗ್ರಾಮ ಕ್ಷೇತ್ರದಲ್ಲಿ ಪರಾಭವಗೊಂಡಿರುವ ಮಮತಾ ಬ್ಯಾನರ್ಜಿ ಆರು ತಿಂಗಳೊಳಗೆ ಶಾಸಕರಾಗಿ ಆಯ್ಕೆಯಾಗಬೇಕಿದೆ.