ಕೊಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೋಲ್ಕತ್ತಾ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಸಿಎಂ ಮಮತಾ ಬ್ಯಾನರ್ಜಿಯವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮದಂತೆ ಕೋಲ್ಕತ್ತಾ ರಾಜಭವನದಲ್ಲಿ ಸರಳವಾಗಿ ಪ್ರಮಾಣವಚನ ಸಮಾರಂಭ ಆಯೋಜಿಸಲಾಗಿತ್ತು.