ಪಾರ್ಟಿ ನೆಪದಲ್ಲಿ ವಿವಸ್ತ್ರಗೊಳಿಸಿ ಬ್ಲ್ಯಾಕ್ ಮೇಲ್: ಮಹಿಳೆ ಸೇರಿ ಇಬ್ಬರ ಬಂಧನ

ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಅಝ್ವೀನ್ ಸಿ ಹಾಗೂ ಬೈಕಂಪಾಡಿ ಜೋಕಟ್ಟೆಯ ಕೆಬಿಎಸ್ ಬೊಟ್ಟು ಹೌಸ್ ನಿವಾಸಿ ಹತೀಜಮ್ಮ ಅಲಿಯಾಸ್ ಸಫ್ನಾ ಎಂದು ಗುರುತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಉಳ್ಳಾಲದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರನ್ನು ಪಾರ್ಟಿಯ ನೆಪದಲ್ಲಿ ಮದ್ಯದ ಜತೆ ಅಮಲು ಪದಾರ್ಥ ಬೆರೆಸಿ ಕುಡಿಸಿ ಅವರನ್ನು ವಿವಸ್ತ್ರಗೊಳಿಸಿ ವೀಡಿಯೋ ಮಾಡಿ ಮನೆಯಿಂದ 2.15 ಲಕ್ಷ ರೂ. ಹಾಗೂ ಉಂಗುರವನ್ನು ಕಳವು ಮಾಡಿ ಹನಿಟ್ರ್ಯಾಪ್ ಗೊಳಪಡಿಸಿರುವ ಬಗ್ಗೆ ದೂರು ದಾಖಲಾಗಿತ್ತು ಎಂದರು.

ದುಬೈನಲ್ಲಿ ಉದ್ಯೋಗದಲ್ಲಿದ್ದು, ಊರಿಗೆ ವಾಪಾಸಾಗಿದ್ದ ವ್ಯಕ್ತಿಯನ್ನು ಅಝ್ವಿನ್ ಹಾಗೂ ಆತನ ಗೆಳತಿ ಸಫ್ನಾ ಅಲಿಯಾಸ್ ಹತಿಜಮ್ಮ ಎಂಬುವವರು ಜುಲೈ 19ರಂದು ಪಾರ್ಟಿ ಮಾಡುವುದಾಗಿ ಹೇಳಿ ವ್ಯಕ್ತಿಗೆ ಮದ್ಯ ಕುಡಿಸಿದ್ದಾರೆ. ಮದ್ಯಕ್ಕೆ ಅಮಲು ಬರುವ ಪದಾರ್ಥವನ್ನು ಬೆರೆಸಿದ್ದರು. ವ್ಯಕ್ತಿ ಮೂರ್ಛೆ ಹೋದ ಬಳಿಕ ಆತನನ್ನು ವಿವಸ್ತ್ರಗೊಳಿಸಿ ಮನೆಯ ಕಪಾಟುವಿನಲ್ಲಿದ್ದ 2.12 ಲಕ್ಷ ರೂಪಾಯಿ ನಗದು ಹಾಗೂ ವ್ಯಕ್ತಿಯ ಕೈಯಲ್ಲಿದ್ದ ನವರತ್ನದ ಉಂಗುರವನ್ನು ಎಗರಿಸಿದ್ದರು.

ಮರುದಿನ ವಂಚನೆಗೊಳಗಾಗಿದ್ದ ವ್ಯಕ್ತಿ ಅಝ್ವೀನ್ ಮನೆಗೆ ಹೋಗಿ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಹೇಳಿದ್ದಾರೆ. ಈ ಸಂದರ್ಭ ಆರೋಪಿಗಳು ಹಣವನ್ನು ನಾಳೆ ಕೊಡುವುದಾಗಿ ಹೇಳಿದ್ದಲ್ಲದೆ, ದೂರು ನೀಡದಂತೆ ನಂಬಿಸಿದ್ದರು. ಆದರೆ ಮತ್ತೆ ಆರೋಪಿಗಳು
ಆ ವ್ಯಕ್ತಿಯ ಮನೆಗೆ ಹೋಗಿ, ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆಯೊಡ್ಡಿದ್ದಾರೆ. ಮಾತ್ರವಲ್ಲದೆ ತನ್ನ ತಂಗಿಯ ಬಲಾತ್ಕಾರಕ್ಕೆ ಯತ್ನಿಸಿರುವುದಾಗಿ ಪ್ರಕರಣ ದಾಖಲಿಸುವುದಾಗಿಯೂ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!