ಕುಡಿದ ಮತ್ತಿನಲ್ಲಿ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಎಪಿಎಂಸಿ ಆವರಣದಲ್ಲಿ ಸುಮಾರು 50 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಗುರುತುಪತ್ತೆಯಾಗಿಲ್ಲ.
ಕೊಲೆಯಾದ ವ್ಯಕ್ತಿಯ ಬಗ್ಗೆ ಯಾವ ಸುಳಿವು ಸಿಕ್ಕಿಲ್ಲ. ಕುಡಿದ ಅಮಲಿನಲ್ಲಿ ಹೊಡೆದಾಡುವಾಗ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದರು.
ದ್ವೇಷದ ಹಿನ್ನೆಲೆಯಲ್ಲಿ ನಿನ್ನೆ ತಡ ರಾತ್ರಿಯೇ ಕೊಲೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಗೌಡಪ್ಪಗೌಡ್ರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.