ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ತಂದೆ ಕೊಚ್ಚಿ ಕೊಂದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಮಗಳು ಗಾಯತ್ರಿ (18)ಯನ್ನು ತಂದೆ ಜಯಣ್ಣ ಕೊಲೆ ಮಾಡಿದ್ದಾನೆ.
ಮಾರಕಾಸ್ತ್ರಗಳಿಂದ ಮಗಳನ್ನು ಕೊಚ್ಚಿ ಕೊಂದಿದ್ದರಿಂದ ಗಾಯತ್ರಿ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದು, ಮಗಳನ್ನು ಕೊಂದ ನಂತರ ಜಯಣ್ಣ ಪೊಲೀಸರಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಹುಣಸೂರು ಡಿವೈಎಸ್ಪಿ ರವಿಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.