ಕೊರೊನಾ ಸೋಂಕಿಗೆ ಹೆದರಿದ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿಜಯನಗರದ ಬಳಿ ಖಾಸಗಿ ಆಸ್ಪತ್ರೆಯಲ್ಲಿ ಪ್ಯಾನ್ ಗೆ ನೇಣು ಬಿಗಿದುಕೊಂಡು ರಾಮಣ್ಣ (61) ನೇಣಿಗೆ ಶರಣಾಗಿದ್ದಾರೆ.
ಶನಿವಾರ ಬೆಳಗಿನ ಜಾವ 1.30ರ ಸುಮಾರಿಗೆ ಆಸ್ಪತ್ರೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ರಾಮಣ್ಣ ಆಸ್ಪತ್ರೆ ಕೊಠಡಿಯ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಜಯನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.