ವಯೋಸಜಹ ಕಾಯಿಲೆಯಿಂದ ಬಳಲುತ್ತಿದ್ದ ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ಧಿ ಡಾ.ಹೆಚ್.ಡಿ.ಚೌಡಯ್ಯ ಮೃತಪಟ್ಟಿದ್ದು, ಅವರಿಗೆ 94 ವರ್ಷ ವಯಸ್ಸಾಗಿತ್ತು.
4 ಬಾರಿ ಕೆರಗೋಡು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಚೌಡಯ್ಯ ಹುಟ್ಟೂರು ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ವಿಧಾನಸಭೆ ಪ್ರತಿಪಕ್ಷ ನಾಯಕರಾಗಿಯೂ ಚೌಡಯ್ಯ ಸೇವೆ ಸಲ್ಲಿಸಿದ್ದ ಚೌಡಯ್ಯ, ಮಂಡ್ಯದ ಪ್ರತಿಷ್ಠಿತ ಪಿಇಟಿ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. ಶಿಕ್ಷಣ ತಜ್ಞರಾಗಿದ್ದ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.
ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಚೌಡಯ್ಯ ನಿಧನಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂಗಳಾದ ಎಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.