ಮಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇದ ಕಾನೂನು ಜಾರಿಗೆ ತರುವ ಮೂಲಕ ಬಿಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ವಿಧೇಯಕ ರಾಜ್ಯ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗಿದ್ದು ಸಂತಸದ ಸಂಗತಿ. ಬಿಜೆಪಿ ಸರ್ಕಾರ ಗೋ ಸಂರಕ್ಷಣೆಗೆ ದಿಟ್ಟ ಕ್ರಮಕೈಗೊಂಡಿದೆ. ಗೋ ಹತ್ಯೆ ನಿಷೇದ ಜಾರಿಗೊಳಿಸುವ ಮೂಲಕ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸಿದೆ. ಮುಂದಿನ ದಿನಗಳಲ್ಲಿ ಕೊಟ್ಟ ಮಾತಿನಂತೆ ಉಳಿದ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.
ಸದನದಲ್ಲಿ ಗೋಹತ್ಯೆ ನಿಷೇಧ ವಿಧೇಯಕವನ್ನು ಹರಿದು ಹಾಕುವ ಮೂಲಕ ಕಾಂಗ್ರೆಸ್ ತನ್ನ ನಿಜಬಣ್ಣವನ್ನು ಬಯಲು ಮಾಡಿದೆ. ಗೋಹತ್ಯೆಗೆ ಪ್ರಚೋದನೆ ನೀಡುವ ಕಾಂಗ್ರೆಸ್ ಪಕ್ಷವನ್ನು ಜನತೆ ಕ್ಷಮಿಸುವುದಿಲ್ಲ. ಗೋ ಹತ್ಯೆಯನ್ನು ಪ್ರಚೋಧಿಸುವ ಕಾಂಗ್ರೆಸ್ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.