ಮಂಗಳೂರಿ (Mangaluru) ನ ಕಂಕನಾಡಿಯಲ್ಲಿ ಕುಕ್ಕರ್ (Cooker) ಬಾಂಬ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳ ( NIA) ಅಧಿಕಾರಿಗಳು ಎಫ್ಐಆರ್ (FIR) ದಾಖಲು ಮಾಡಿದ್ದಾರೆ. ಎನ್ಐಎ ಪ್ರಾಥಮಿಕ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಆರೋಪಿಯು ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಸಂಚು ರೂಪಿಸಿರುವುದು ಬಯಲಾಗಿದೆ.
ತನಿಖಾಧಿಕಾರಿಗಳು ನಡೆಸಿದ ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಯು ದೊಡ್ಡ ಪ್ರಮಾಣದ ಸಂಚು ರೂಪಿಸಿರುವುದು ಬಯಲಾಗಿತ್ತು. ಘಟನಾ ಸ್ಥಳದಲ್ಲಿ 5 ಲೀಟರ್ ಕುಕ್ಕರ್, 9 ವೋಲ್ಟ್ಸ್ ಸಾಮರ್ಥ್ಯದ 3 ಬ್ಯಾಟರಿಗಳು, ಕೆಟ್ಟಿರುವ ಸರ್ಕಿಟ್ಗಳು ಸೇರಿದಂತೆ ಹಲವು ಎಲೆಕ್ಟ್ರಿಕ್ ಉಪಕರಣಗಳು ಪತ್ತೆಯಾಗಿದ್ದವು. ಇವೆಲ್ಲವನ್ನೂ ಈಗ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಶಾರೀಕ್ ವಾಸವಿದ್ದ ಮೈಸೂರಿನ ಮನೆಯಲ್ಲಿಯೂ ಎನ್ಐಎ ಅಧಿಕಾರಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : – ಕನ್ನಡದ `ಕಾಂತಾರ’ ಇಂದು ತುಳು ಭಾಷೆಯಲ್ಲಿ ರಿಲೀಸ್
ಪರಿಶೀಲನೆ ವೇಳೆ ಮನೆಯಲ್ಲಿ ಸುಧಾರಿತ ಸ್ಫೋಟಕಗಳ ತಯಾರಿಕೆಗೆ ಬಳಸುವ ಹಲವು ಪರಿಕರಗಳು ಪತ್ತೆಯಾಗಿದ್ದವು. ರಾಷ್ಟ್ರದ ಭದ್ರತೆಗೆ ಧಕ್ಕೆ ತರುವ ಪ್ರಕರಣವಾಗಿರುವ ಕಾರಣ ಕೇಂದ್ರ ಸರ್ಕಾರದ ನಿರ್ದೇಶನದಂತೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಎನ್ಐಎ ಅಧಿಕಾರಿಗಳು FIR ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ : – “ಬ್ರಾಹ್ಮಣ ಭಾರತ್ ಛೋಡೋ”– JNU ಕ್ಯಾಂಪಸ್ ಗೋಡೆಗಳ ಮೇಲೆ ವಿವಾದಾತ್ಮಕ ಬರಹ