ಮಂಗಳೂರು ಪತ್ರಕರ್ತರ ಗ್ರಾಮ ವಾಸ್ತವ್ಯ: ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರ ಉದ್ಘಾಟನೆ

ದಕ್ಷಿಣ ಕನ್ನಡ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ಪತ್ರಕರ್ತರ ಗ್ರಾಮ ವಾಸ್ತವ್ಯ ಹಾಗೂ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಉದ್ಘಾಟಿಸಿದರು.
ಶಿಬಿರದ ವೇಳೆ ವಿವಿಧ ಇಲಾಖೆಗಳ ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಾಯಿತು. ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಳ್, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಹಾಜರಿದ್ದರು. ಜಿಲ್ಲಾಧಿಕಾರಿ ಹಾಗೂ ಇತರ ಅತಿಥಿಗಳನ್ನು ಗ್ರಾಮಸ್ಥರು ಪೂರ್ಣ ಕುಂಭದ ಮೂಲಕ ಸ್ವಾಗತ ಕೋರಿದರು.