ಮಂಗಳೂರು : ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಇಲಾಖೆಯಿಂದ ಕೈಗೊಂಡ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿಯನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.
ಸುಮಾರು 1500 ಲಕ್ಷ ರೂಪಾಯಿಗಳಲ್ಲಿ ನಿರ್ಮಾಣಗೊಂಡ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ( ಎಸ್.ಹೆಚ್-37)ಯನ್ನು ಧರ್ಮಸ್ಥಳದಲ್ಲಿ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಹಾಗೂ ಮತ್ತಿತರ ಜನಪ್ರತಿನಿಧಿಗಳು ಹಾಜರಿದ್ದರು.