ತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಾಹಾ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್.ಎನ್ ಅರ್ಯ ಪ್ರಮಾಣ ವಚನ ಬೋಧಿಸಿದರು. ಇದನ್ನೂ ಓದಿ : – ಕಾಶ್ಮೀರಿ ಪಂಡಿತರ ಹತ್ಯೆಗಿಂತ ಸಿನಿಮಾ ಬಗ್ಗೆ ಮಾತಾಡೋದು ಪ್ರಧಾನಿಗೆ ಮುಖ್ಯವಾಗಿದೆ – ರಾಹುಲ್
ಮಾಜಿ ಮುಖ್ಯಮಂತ್ರಿ ಬಿಪ್ಬಲ್ ಕುಮಾರ್ ದೇಬ್ ಶನಿವಾರ ಸಂಜೆ ದಿಢೀರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮಾಣಿಕ್ ಸಾಹಾ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ್ನಾಗಿ ನೇಮಕ ಮಾಡಲಾಗಿತ್ತು.ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಚಿವರು, ಬಿಜೆಪಿಯ ಶಾಸಕರು ಉಪಸ್ಥಿತರಿದ್ದರು.
ಇದನ್ನೂ ಓದಿ : – ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾಲಿಬಾನ್ ಸರ್ಕಾರ ಬರುತ್ತೆ – ಪ್ರತಾಪ್ ಸಿಂಹ