ಒಂದು ವಾರ ತಡವಾಗಿ ಪ್ರಸಕ್ತ ಸಾಲಿನ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು, ಕರಾವಳಿ ಸೇರಿದಂತೆ 22 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ನೈರುತ್ಯ ಮುಂಗಾರು ಶುಕ್ರವಾರ ಕರಾವಳಿ ಮೂಲಕ ದಕ್ಷಿಣ ಒಳನಾಡು ಪ್ರವೇಶಿಸಿದ್ದು, ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ವಾಡಿಕೆಗಿಂತ ಹೆಚ್ಚು ಮಳೆ ಅಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಳೆದ ಎರಡು ವರ್ಷ ಮುಂಗಾರು ವೇಳೆ ಭಾರೀ ಅನಾಹುತ ಸಂಭವಿಸಿದ್ದು, ಭೂಕುಸಿತದಿಂದ ಸಾಕಷ್ಟು ಹಾನಿಯಾಗಿತ್ತು.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ. ಶಿವಮೊಗ್ಗ, ದಾವಣಗೆರೆ, ಚಿಕ್ಕ ಬಳ್ಳಾಪುರ ಸೇರಿದಂತೆ 22 ಜಿಲ್ಲೆಗಳಲ್ಲಿ ಭಾರಿ ಮಳೆ ಅಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.