ರಾಯಚೂರು : ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಪ್ರತಾಪ್ ಗೌಡ ಅವರಿಗೆ ಲಿಂಗಸಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್ ಟಿ ಪಿ ಸಿ ಆರ್ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಗೆ ಸೋಂಕು ಧೃಡವಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರತಾಪ್ ಗೌಡ ಪಾಟೀಲ್ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇದೇ ಹೊತ್ತಿನಲ್ಲಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎನ್ನಲಾಗಿದೆ.
ಚುನಾವಣೆ ಹೊತ್ತಲ್ಲೇ ಪ್ರತಾಪ್ ಗೌಡ ಅವರಿಗೆ ಕೊರೋನಾ ಸೋಂಕು ತಗುಲಿದೆ. ಘಟಾನುಘಟಿ ನಾಯಕರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸೋಂಕು ತಗುಲಿ ಅಭ್ಯರ್ಥಿ ಮನೆ ಸೇರಿಕೊಂಡಿರುವುದರಿಂದ ಅವರ ಪರವಾಗಿ ಕಾರ್ಯಕರ್ತರು, ನಾಯಕರು ಪ್ರಚಾರ ಕೈಗೊಂಡಿದ್ದಾರೆ