ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ 86,337 ಮತ ಪಡೆಯುವ ಮೂಲಕ ಬರೋಬ್ಬರಿ 30,606 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ.
ಮೊದಲ ಸುತ್ತಿನಲ್ಲೇ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿಯನ್ನ ಹಿಂದಿಕ್ಕಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್, ಅಂತಿಮವಾಗಿ 86,222 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದೆ.
ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 55,731 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ. ಇದಕ್ಕೂ ಮುನ್ನವೇ ಅಂದರೆ ಮತ ಎಣಿಕೆ ಪೂರ್ಣಗೊಳ್ಳುವ ಮುನ್ನವೇ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಸೋಲೊಪ್ಪಿಕೊಂಡರು.