ನಾಳೆಯಿಂದ ಸಾರಿಗೆ ನೌಕರರ ಬೃಹತ್ ಧರಣಿ ಸತ್ಯಾಗ್ರಹ, ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಳಂಬ ಧೋರಣೆ ಖಂಡಿಸಿ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಳಂಬ ಧೋರಣೆ ಖಂಡಿಸಿ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ನಾಳೆಯಿಂದ (ಜನವರಿ 24) ಧರಣಿ ಸತ್ಯಾಗ್ರಹ (Karnataka KSRTC And BMTC Employess Protest) ನಡೆಸಲು ನಿರ್ಧರಿಸಿದ್ದಾರೆ.

BMTC & KSRTC | A BMTC Bengaluru Sarige Midi bus and a KSRTC … | Flickr

ನಗರದಲ್ಲಿರುವ ನಾಲ್ಕೂ ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಯಲಿದ್ದು, ಫ್ರೀಡಂ ಪಾರ್ಕ್ನಲ್ಲಿ ಬಿಎಂಟಿಸಿ ನೌಕರರಿಂದ ಧರಣಿ ಸತ್ಯಾಗ್ರಹ ನಡೆಯಲಿದೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ 2021ರ ಏಪ್ರಿಲ್ ತಿಂಗಳಲ್ಲಿ 15 ದಿನಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿದ್ದರು. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಇಳಿದಿರುವುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ವೀಕೆಂಡ್ ಕರ್ಫ್ಯೂನಲ್ಲೂ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ; ಜನರ ಅನುಕೂಲಕ್ಕಾಗಿ ಕ್ರಮ | TV9 Kannada

ಜನವರಿ 24 ರಂದು ಸಾರಿಗೆ ನೌಕರರಿಂದ ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗುತ್ತಿದ್ದು, ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ಹೆಚ್ಚಿನ ನೌಕರರು ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಲಿರುವ ಹಿನ್ನಲೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಇದನ್ನು ಓದಿ :- ಸುರ್ಜೇವಾಲಾ ಅವರೇ ಹೊಸ ಬಾಟಲಿಗೆ ಹಳೆಯ ಮದ್ಯ ತುಂಬುವ ವ್ಯರ್ಥದ ಕೆಲಸ ಏಕೆ? ಹೆಚ್ಡಿಕೆ ಪ್ರಶ್ನೆ

Bengaluru: Metro services to resume, BMTC, KSRTC to ply 5,000 buses from Monday as Covid rules eased | Mint

ಸಾರಿಗೆ ನೌಕರರಿಗೆ ಶೇ 25 ರಷ್ಟು ವೇತನ ಹೆಚ್ಚಳ ಆಗಬೇಕು ನೌಕರರ ಹಾಲಿ ಇರುವ ಬಾಟ, ಭತ್ಯೆಗಳು 5 ಪಟ್ಟು ಹೆಚ್ಚಿಸವೇಕು. ವೈದ್ಯಕೀಯ ಸೌಲಭ್ಯ ನೀಡಬೇಕು. ಎಲ್ಲಾ ನೌಕರರಿಗೆ ಪ್ರತಿ ತಿಂಗಳು ಹೊರರೋಗಿ ಚಿಕಿತ್ಸೆ ವೆಚ್ಚಕ್ಕಾಗಿ 2 ಸಾವಿರ ನೀಡಬೇಕು. ಕಳೆದ ಬಾರಿ ಮುಷ್ಕರ ವೇಳೆ ವಜಾಗೊಂಡ ನೌಕರರ ಮರುನೇಮಕ ಮಾಡಬೇಕು. ಹೆಚ್ಚುವರಿ ಕೆಲಸದ ಅವಧಿಗೆ ಟೈಮ್ ಭತ್ಯೆ ನೀಡಬೇಕು. ನೌಕರರಿಗೆ ಪಾಳಿ ವ್ಯವಸ್ಥೆ ಜಾರಿಯಾಗಬೇಕು. ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕ ನಿಲ್ಲಿಸಬೇಕು. ಎಲ್ಲಾ ನೌಕರರಿಗೆ ಗ್ರಾಚ್ಯೂಟಿ ನೀಡಬೇಕು. ಕೂಡಲೇ ಖಾಲಿ ಹುದ್ದೆಗಳನ್ನ ಭರ್ತಿ ಮಾಡಬೇಕು ಎಂಬುದು ನೌಕರರ ಬೇಡಿಕೆಯಾಗಿದೆ.

ಇದನ್ನು ಓದಿ :-  ಬಿಜೆಪಿ ಸರ್ಕಾರದಲ್ಲಿ ಲಂಚ ಕೊಡದಿದ್ದರೆ ಯಾವ ಕೆಲಸ ಆಗಲ್ಲ – ಮಾಜಿ ಸಿಎಂ ಸಿದ್ದರಾಮಯ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!