ರಾಯಚೂರು : ಮಂತ್ರಾಲಯ ಮಠದ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಸುಯಮೀಂದ್ರಾಚಾರ್ (54) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದು, ಮಠದ ಈ ಹಿಂದಿನ ಪೀಠಾಧಿಪತಿಗಳಾದ ಸುಯತೀಂದ್ರತೀರ್ಥರ ಪೂರ್ವಾಶ್ರಮದ ಪುತ್ರ ಇವರಾಗಿದ್ದರು.
2009 ನೇ ಸಾಲಿನಲ್ಲಿ ಶ್ರೀ ಮಠದ ಆಪ್ತ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಪ್ರವಾಹದಲ್ಲಿ ನಲುಗಿ ಹೋಗಿದ್ದ ಮಂತ್ರಾಲಯದಲ್ಲಿ ಅಭಿವೃದ್ದಿ ಪರ್ವ ನಡೆಸಿದ್ದರು. ಅವರು ನವ ಮಂತ್ರಾಲಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಇನ್ನು ಕೊರೊನಾ ಎರಡನೇ ಆಲೆ ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ, ನಾಳೆಯಿಂದ ಮಂತ್ರಾಲಯ ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಭಕ್ತಾದಿಗಳಿಗೆ ಕೇವಲ ಆನ್ಲೈನ್ ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.