ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ ! – ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು – ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯ

ಹವಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ( kumarswamy ) ಗೆ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.


ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ( jds ) ಕಣ್ಣೀರಧಾರೆ ಯಶಸ್ವಿಯಾಗಲಿ ! ಮುಂದಿನ ಚುನಾವಣೆಯಲ್ಲಿ ಕಣ್ಣೀರಿನ ಮೂಲಕವಾದರೂ ಇರುವ 30 ಸೀಟು ಉಳಿಸಿಕೊಳ್ಳಲು ಜೆಡಿಎಸ್ ಹೆಣಗಾಡುತ್ತಿದೆ. ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು.  ಇದನ್ನು ಓದಿ :-  ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ- ಸಿಎಂ ಬೊಮ್ಮಾಯಿ

ಇಲ್ಲದ ಕಣ್ಣೀರು ಒತ್ತರಿಸಿ ಬರುವುದು ಇಲ್ಲಿ ಸಾಮಾನ್ಯ! ಒಂದೆಡೆ ಜನತಾ ಜಲಧಾರೆ ಮತ್ತೊಂದೆಡೆ ಕಣ್ಣೀರಧಾರೆ ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು. ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ ಎಂದು ಬಿಜೆಪಿ ವ್ಯಂಗ್ಯವಾಡಿದೆ.

 ಇದನ್ನು ಓದಿ :- ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ –ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳ ಬಂಧನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!