ಸಂವಿಧಾನ ಒಂದು ಅಸ್ತ್ರವಾಗಿದೆ. ಆದರೆ ಎಲ್ಲಾ ಸಂಸ್ಥೆಗಳು ಈಗ ಆರ್ ಎಸ್ಎಸ್ ಹಿಡಿತದಲ್ಲಿವೆ. ಹೀಗಾಗಿ ಸಂವಿಧಾನ ಅರ್ಥಹೀನವಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇದೇ ವೇಳೆ ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಅವರು ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.
”ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಾಯಾವತಿಯವರಿಗೆ ಮೈತ್ರಿ ಮಾಡಿಕೊಳ್ಳುವಂತೆ ನಾವು ಸಂದೇಶ ನೀಡಿದ್ದೇವು. ಅಲ್ಲದೆ ಅವರಿಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗುವಂತೆ ಕೇಳಿಕೊಂಡಿದ್ದೆವು. ಆದರೆ ಅವರು ನಮ್ಮೊಂದಿಗೆ ಮಾತನಾಡಲೇ ಇಲ್ಲ ಎಂದು ಆರೋಪಿಸಿದ್ದಾರೆ. ಇದನ್ನು ಓದಿ :- ಭಾರತದ ವಿರುದ್ಧ ಮಾತನಾಡಲು ಧೈರ್ಯ ಬೇಕು – ಪಾಕ್ ಪ್ರಧಾನಿ ಇಮ್ರಾನ್ ಖಾನ್
ರಾಹುಲ್, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ತೋರಿಸಿದ ಮಾರ್ಗದ ಮೂಲಕ ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಡುವಂತೆ ಮಾಡಿದ್ರು. “ಸಂವಿಧಾನವು ಭಾರತದ ಅಸ್ತ್ರವಾಗಿದೆ. ಆದರೆ ಅದನ್ನು ಸರಿಯಾಗಿ ಅನುಸರಿಸದಿದ್ದರೆ ಸಂವಿಧಾನಕ್ಕೆ ಅರ್ಥವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತೇವೆ. ಆದರೆ ಸಂವಿಧಾನವನ್ನು ಹೇಗೆ ಜಾರಿಗೆ ತರಲಾಗುತ್ತದೆ? ಎಂದು ಪ್ರಶ್ನಿಸಿದ ರಾಹುಲ್, ಎಲ್ಲಾ ಸಂಸ್ಥೆಗಳು ಆರ್ಎಸ್ಎಸ್ ವಶದಲ್ಲಿವೆ’ ಎಂದು ಗಂಭೀರ ಆರೋಪಿಸಿದ್ದಾರೆ.
ಇದನ್ನು ಓದಿ :- ಪತ್ನಿಯ ತೆರಿಗೆ ಪಾವತಿ ವಿವಾದ- ಬ್ರಿಟನ್ ಪಿಎಂ ರೇಸ್‌ನಿಂದ ನಾರಾಯಣಮೂರ್ತಿ ಅಳಿಯ ಔಟ್